ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿ ಆಸಡ್ಡಿತನಕ್ಕೆ ಯುವತಿ ಬ-ಲಿ-ಯಾಗಿದ್ದು, ಸಾ-ವಿ-ನಲ್ಲೂ ಸಾರ್ಥಕತೆ ಮೆರೆದಿರುವಂತಹ ಘಟನೆ ನಡೆದಿದೆ. ಸೋಮನಹಳ್ಳಿ ತಾಲೂಕಿನ ತಾಂಡ್ಯದ ರಕ್ಷಿತಾ ಮೃ’ತ ಯುವತಿ. ಬಸ್ ನಿಂದ ಕೆಳಗೆ ಬಿದ್ದು ರಕ್ಷಿತಾ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು. ಚಿಕ್ಕಮಂಗಳೂರಿನ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜ್ ನಲ್ಲಿ ರಕ್ಷಿತಾ ವ್ಯಾಸಂಗ ಮಾಡುತ್ತಿದ್ದರು. ಮಗಳ ಅಂಗಾಂಗ ದಾನಕ್ಕೆ ಪೋಷಕರಾದ ತಾಯಿ ಲಕ್ಷ್ಮೀ ಬಾಯಿ, ತಂದೆ ಸುರೇಶ್ ನಾಯಕ್ ಸಂಪೂರ್ಣ ಒಪ್ಪಿಗೆ ನೀಡಿ ಹೆಮ್ಮೆಗೆ ಒಳಗಾಗಿದ್ದಾರೆ.
ಸದ್ಯ ಚಿಕ್ಕಮಂಗಳೂರು ಜಿಲ್ಲೆ ಆಸ್ಪತ್ರೆಯಲ್ಲಿರುವ ರಕ್ಷಿತಾ ನಾಯಕ್ ಮೃ’ತ ದೇಹವಿದ್ದು, ಇಂದು ಸಂಜೆ ತಜ್ಞರ ತಂಡ ಚಿಕ್ಕಮಂಗಳೂರಿಗೆ ಆಗಮಿಸಲಿದೆ. ನಾಳೆ ಮಧ್ಯಾಹ್ನದ ಹೊತ್ತಿಗೆ 2 ಹೆಲಿಕ್ಯಾಪ್ಟರ್ ನಲ್ಲಿ ಅಂಗಾಂಗ ರವಾನೆ ಮಾಡಲಿದ್ದು, ಇದೇ ಮೊದಲ ಬಾರಿಗೆ ಅಪರೂಪದ ಪ್ರಕಾರಣಕ್ಕೆ ಕಾಫಿನಾಡು ಚಿಕ್ಕಮಂಗಳೂರು ಸಾಕ್ಷಿಯಾಗಲಿದೆ. ಬಸ್ ನಿಂದ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಬಾಲಕಿಯ ಅಂಗಾಗ ದಾನಕ್ಕೆ ಪೋಷಕರು ಮುಂದಾಗಿದ್ದು, ಮಗಳ ಸಾ’ವಿ’ನ ದುಃಖದಲ್ಲೂ ಮಾದರಿಯಾಗಿದ್ದಾರೆ.
ಸಾ-ವಿ-ನಲ್ಲೂ ಸಾರ್ಥಕತೆ ಮೆರೆದ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ ಎಂಟು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಚಿಕ್ಕಮಂಗಳೂರು ನಗರದ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ 18 ವರ್ಷದ ಯುವತಿ ರಕ್ಷಿತಾ, ಕಳೆದ ಐದು ದಿನಗಳ ಹಿಂದೆ ಸರ್ಕಾರಿ ಬಸ್ ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು ಅದೇ ಕೂಡಲೇ ಆಸ್ಪತ್ರೆಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹಾಗಾಗಿ, ರಕ್ಷಿತಾ ಪೋಷಕರು ಆಕೆಯ ಅಗಲಿಕೆಯ ನೋವಿನಲ್ಲೂ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದರು.
ಹೌದು ರಕ್ಷಿತಾಳ ಒಂಬತ್ತು ಅಂಗಾಂಗಳಿಂದ 9 ಜನರ ಜೀವ ಉಳಿದಿದೆ. ಹಾಗಾಗಿ, ಸರ್ಕಾರ ಆಕೆಯ ಕುಟುಂಬಕ್ಕೆ ಪರಿಹಾರ ಎನ್ನುವುದಕ್ಕಿಂತ ಗೌರವಯುತವಾಗಿ ಎಂಟು ಲಕ್ಷ ರೂಪಾಯಿ ಹಣವನ್ನು ನೀಡಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ರೂಪಾಯಿ. ತಾಂಡಾ ಅಭಿವೃದ್ಧಿ ನಿಗಮದಿಂದ ಒಂದು ಲಕ್ಷ ರೂಪಾಯಿ ಹಾಗೂ ಉದ್ಯಮಶೀಲತೆ ಯೋಚನೆಯಡಿ 2 ಲಕ್ಷ ರೂಪಾಯಿ. ಹಣವನ್ನು ಸರ್ಕಾರ ಮಂಜೂರು ಮಾಡಿದೆ.
ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡುಚಿ ಶಾಸಕ ಪಿ. ರಾಜೀವ್ ಕಡೂರಿನ ಸೋಮನಹಳ್ಳಿ ತಾಂಡ್ಯಾದ ರಕ್ಷಿತಾ ಮನೆಗೆ ಭೇಟಿ ನೀಡಿ ತಾಂಡ ಅಭಿವೃದ್ಧಿ ನಿಗಮದ ಒಂದು ಲಕ್ಷ ರೂಪಾಯಿ. ಹಾಗೂ ಉದ್ಯಮಶೀಲತೆ ಯೋಜನೆಯಡಿಯ 2 ಲಕ್ಷ ಒಟ್ಟು ಮೂರು ಲಕ್ಷ ರೂಪಾಯಿ ರೂಪಾಯಿ ಹಣದ ಚೆಕ್ ನೀಡಲಿದ್ದಾರೆ. ಸರ್ಕಾರದ ಪ್ರತಿನಿಧಿಯಾಗಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮುಖ್ಯಮಂತ್ರಿ ಪರಿಹಾರ ನಿಧಿಯ 5 ಲಕ್ಷ ರೂ. ಚೆಕ್ ನೀಡಲಿದ್ದಾರೆ. ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ತಿಳಿಸಿ.