ಪ್ರತಿಭಾವಂತ ನಟ ಅಭಿಷೇಕ್ ಅಂಬರೀಶ್ ಅವರು ಕನ್ನಡ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿ ಕೆರಿಯರ್ ನಲ್ಲಿ ಬ್ಯುಸಿಯಾಗಿರುವ ನಟ ಅಭಿಷೇಕ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಚಂದನವನದಲ್ಲಿ ಅಭಿಷೇಕ್ ಅಂಬರೀಶ್ ಅವರ ಮದುವೆ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಅಂದಹಾಗೆ, ಡಿಸೆಂಬರ್ 2ನೇ ವಾರದಲ್ಲಿ ಅಭಿಷೇಕ್ ಅವರ ನಿಶ್ಚಿತಾರ್ಥ ಖ್ಯಾತ ಮಾಡೆಲ್ ಒಬ್ಬರ ಜೊತೆ ನಡೆಯಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿವೆ.
ಅಭಿಯವರ ಎಂಗೇಜ್ಮೆಂಟ್ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎನ್ನಲಾಗಿದ್ದು, ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪ ಪುತ್ರಿ, ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಅವರು ಎಂಗೇಜ್ ಆಗಲಿದ್ದಾರೆ. ಆದರೆ ನಿಶ್ಚಿತಾರ್ಥದವರೆಗೂ ಹುಡುಗಿಯ ಬಗ್ಗೆ ಆಗಲಿ ಅಥವಾ ಮದುವೆ ಬಗ್ಗೆ ಆಗಲಿ ಯಾರಿಗೂ ವಿಚಾರ ತಿಳಿಯಬಾರದು ಎನ್ನುವ ಕಾರಣದಿಂದಾಗಿ ಕುಟುಂಬದವರು ಈ ಸುದ್ದಿಯನ್ನು ಗುಟ್ಟಾಗಿ ಇಟ್ಟಿದ್ದಾರೆ. ಸದ್ಯಕ್ಕೆ ನಿಶ್ಚಿತಾರ್ಥದ ಸಿದ್ಧತೆಗಳು ನಡೆಯುತ್ತಿದ್ದು, ಮದುವೆ ದಿನಾಂಕ ಸೇರಿದಂತೆ ಈ ಕುರಿತಾದ ಮಾಹಿತಿಯು ಸದ್ಯದಲ್ಲೇ ಹೊರ ಬೀಳಲಿದೆ.
ಆದರೆ ಕಳೆದ ಕೆಲ ದಿನಗಳ ಹಿಂದೆ ಮದುವೆ ಬಗ್ಗೆ ಪ್ರತಿಕ್ರಿಯಿಸಿದ್ದ ಅಭಿಷೇಕ್ ಅಂಬರೀಷ್ ಪ್ರತಿ ಸಲ ನನ್ನ ಮದುವೆ, ನಿಶ್ಚಿತಾರ್ಥದ ಬಗ್ಗೆ ಈ ರೀತಿ ನ್ಯೂಸ್ ಕೇಳುತ್ತಿದ್ದೇನೆ. ನಾನು ನಿತ್ಯ ಕನಕಪುರಕ್ಕೆ ಶೂಟಿಂಗ್ಗೆ ಹೋಗುತ್ತಿದ್ದೇನೆ. ಇದರ ಮಧ್ಯೆ ಯಾವಾಗ ಹುಡುಗಿ ನೋಡಿದೆ, ಯಾವಾಗ ನಿಶ್ಚಿತಾರ್ಥ ಮಾಡಿಕೊಂಡೆ ಎಂದು ಗೊತ್ತಿಲ್ಲ. ಪದೇ ಪದೇ ನಿಶ್ಚಿತಾರ್ಥದ ಬಗ್ಗೆ ಮಾತನಾಡ್ತಿದ್ರೆ ಮುಂದೆ ನನಗೆ ಯಾರೂ ಹುಡುಗಿ ಕೊಡಲ್ಲ” ಎಂದಿದ್ದರು. ಮಗನ ಮದುವೆಯ ಬಗ್ಗೆ ಮಾತನಾಡಿದ್ದ ಸುಮಲತಾ, ” ಕಳೆದ ಎರಡು ವರ್ಷಗಳಿಂದಲೂ ಇಂಥ ವದಂತಿ ಹರಡುತ್ತಲೇ ಇದೆ. ಡಿಸೆಂಬರ್ನಲ್ಲಿ ನಿಶ್ಚಿತಾರ್ಥ ನಡೆಯುತ್ತದೆ ಎಂಬುದೆಲ್ಲ ಸುಳ್ಳು. ಆ ರೀತಿ ಯಾವುದೇ ಪ್ಲ್ಯಾನ್ ಇಲ್ಲ, ಸದ್ಯ ಆತ ಸಿನಿಮಾದಲ್ಲಿ ಬ್ಯುಸಿ ಇದ್ದಾನೆ. ಬ್ಯಾಡ್ ಮ್ಯಾನರ್ಸ್ʼ ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದರು.
ವೈಯುಕ್ತಿಕ ವಿಚಾರಗಳಿಂದ ಸುದ್ದಿಯಾಗುತ್ತಿರುವ ಅಭಿಷೇಕ್ ಅಂಬರೀಶ್ ಸಿನಿ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ. ಹೌದು, ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಬ್ಯಾಡ್ ಮ್ಯಾನರ್ಸ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬ್ಯಾಡ್ ಮ್ಯಾನರ್ಸ್ ಸಿನಿಮಾದ ಸದ್ಯದಲ್ಲೇ ತೆರೆಗೆ ಬರಲಿದೆ. ಅದರ ಜೊತೆಗೆ, ನಿರ್ದೇಶಕ ಕೃಷ್ಣ ನಿರ್ದೇಶಿಸಿ ನಿರ್ಮಿಸುತ್ತಿರುವ ‘ಕಾಳಿ’ ಸಿನಿಮಾದಲ್ಲಿ ಅಭಿಷೇಕ್ ನಟಿಸುತ್ತಿದ್ದು, ಶೂಟಿಂಗ್ ಶುರುವಾಗಲಿದೆ. ಅಷ್ಟೇ ಅಲ್ಲದೆ, ‘ಮದಗಜ’ ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾವನ್ನು ಒಪ್ಪಿಕೊಂಡಿದ್ದು, ಸಾಲು ಸಾಲು ಸಿನಿಮಾಗಳು ರೆಬಲ್ ಸ್ಟಾರ್ ಪುತ್ರನ ಕೈಯಲ್ಲಿದೆ.