ರೆಬಲ್ ಸ್ಟಾರ್ ಪುತ್ರ ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪರವರ ಅರಶಿಣ ಶಾಸ್ತ್ರದ ಸಂಭ್ರಮ ಹೇಗಿತ್ತು ಗೊತ್ತಾ? ಇಡೀ ಕರ್ನಾಟಕದಲ್ಲಿ ಕಳೆ ಮೂಡಿದೆ!!

ರೆಬಲ್ ಸ್ಟಾರ್ ಪುತ್ರ ನಟ ಅಭಿಷೇಕ್ ಅಂಬರೀಶ್ (Actress Abhishek Ambarish) ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹೌದು, ಸ್ಯಾಂಡಲ್​ವುಡ್​​ ನಟ ರೆಬೆಲ್ ಸ್ಟಾರ್ ಅಂಬರೀಶ್ ಸುಪುತ್ರ ಅಭಿಷೇಕ್ ಅಂಬರೀಶ್ ವಿವಾಹ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಅರಿಶಿಣ ಶಾಸ್ತ್ರದ ಸಂಭ್ರಮದಲ್ಲಿರುವ ನಟ ಅಭಿಷೇಕ್ ಫೋಟೋ ಸೋಶಿಯಲ್​​​ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅರಶಿಣ ಶಾಸ್ತ್ರವು ಅದ್ದೂರಿಯಾಗಿ ನಡೆದಿದೆ. ಅಭಿಷೇಕ್ ಅಂಬರೀಶ್ (Abhishek Ambarish) ಹಾಗೂ ಅವಿವಾ ಬಿದ್ದಪ್ಪ (Aviva Biddappa) ಇಬ್ಬರ ಮನೆಯಲ್ಲಿಯೂ ಶಾಸ್ತ್ರೋಕ್ತವಾಗಿ ಅರಿಶಿಣ ಶಾಸ್ತ್ರ ನಡೆದಿದೆ. ಬಿಳಿ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಅರಿಶಿನ ಶಾಸ್ತ್ರದಲ್ಲಿ ಮಿಂಚಿದ್ದು, ಮನೆ ಕೂಡ ಅದ್ದೂರಿಯಾಗಿ ಅಲಂಕಾರ ಮಾಡಲಾಗಿದೆ.

ರೆಬಲ್ ಸ್ಟಾರ್ ಪುತ್ರನ ಮದುವೆಯೂ ಜೂನ್ 5ರಂದು (ಸೋಮವಾರ) ಅದ್ದೂರಿಯಾಗಿ ನಡೆಯಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭವನ್ನು ಆಯೋಜಿಸಲಾಗಿದೆ. ಈಗಾಗಲೇ ನಟ ಅಭಿಷೇಕ್ ಅಂಬರೀಶ್ ಅವರ ಮದುವೆ ಆಮಂತ್ರಣ ಪತ್ರಿಕೆಯೂ ಪ್ರಧಾನಿ ಮೋದಿ (PM Modi), ಗೃಹ ಸಚಿವ ಅಮಿತ್ ಶಾ (Home Minister Amish Sha), ರಜನಿಕಾಂತ್ (Rajani Kanth), ಮೆಗಾಸ್ಟಾರ್ ಚಿರಂಜೀವಿ (Mega Star Chiranjivi) ಸೇರಿದಂತೆ ಹಲವು ಗಣ್ಯರ ಕೈ ಸೇರಿದೆ. ರೆಬಲ್ ಸ್ಟಾರ್ ಅಂಬರೀಶ್ ರವರ ಪುತ್ರನ ಮದುವೆಗೆ ಸಿನಿಮಾರಂಗದ ಗಣ್ಯರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

ಕಳೆದ ವರ್ಷ ಡಿಸೆಂಬರ್ 11 ರಂದು ರೆಬಲ್​ ಸ್ಟಾರ್​’ ಅಂಬರೀಷ್​ ದಂಪತಿಗಳ ಪುತ್ರ ಅಭಿಷೇಕ್​ ಅಂಬರೀಷ್ ಅವರು ಖ್ಯಾತ ಫ್ಯಾಷನ್‌ ಡಿಸೈನರ್‌ ಪ್ರಸಾದ್‌ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ ಜೊತೆಗೆ ಖಾಸಗಿ ಹೋಟೆಲ್​​ನಲ್ಲಿ ನಿಶ್ಚಿತಾರ್ಥ ನೆರೆವೇರಿತ್ತು. ಎರಡು ಕುಟುಂಬದವರ ಸದಸ್ಯರು ಹಾಗೂ ಬಂಧುಗಳ ಸಮ್ಮುಖದಲ್ಲಿ ಈ ಜೋಡಿ ಪರಸ್ಪರ ಉಂಗುರಗಳನ್ನು ಬದಲಾಯಿಸಿ ಕೊಂಡಿದ್ದರು. ನಗರದ ಪ್ರತಿಷ್ಠಿತ ಫೋರ್ ಸೀಸನ್ಸ್ ಹೊಟೇಲ್‍ (Four Season Hotel) ನಲ್ಲಿ ನಡೆದ ನಿಶ್ಚಿತಾರ್ಥದಲ್ಲಿ ಅಂಬರೀಷ್ ಹಾಗೂ ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪರ ಕುಟುಂಬದವರು, ಸಚಿವ ಅಶ್ವತ್ಥ ನಾರಾಯಣ, ನಿರ್ದೇಶಕ ಆಯೋಗ್ಯ ಮಹೇಶ್ (Mahesh), ರಾಕ್ ಲೈನ್ ವೆಂಕಟೇಶ್ ( Rock Line Venkatesh), ದರ್ಶನ್ (Darshan) ಹಾಗೂ ರಾಕಿಂಗ್ ಸ್ಟಾರ್ ಯಶ್ (Rocking Star Yash) ದಂಪತಿಗಳು ಸೇರಿದಂತೆ ಕೆಲ ನಿರ್ಮಾಪಕರು, ನಿರ್ದೇಶಕರು, ಆಪ್ತರು ಮಾತ್ರ ಪಾಲ್ಗೊಂಡಿದ್ದರು.

ಅಂದಹಾಗೆ, ಕಳೆದ ಕೆಲವು ವರ್ಷಗಳಿಂದ ಅಭಿಷೇಕ್ ಹಾಗೂ ಅವಿವಾರವರು ಪ್ರೀತಿಸುತ್ತಿದ್ದರು. ಹೌದು, ನಟ ಅಭಿಷೇಕ್ ಮತ್ತು ಅವಿವಾ ಅವರ ಪ್ರೇಮ 5 ವರ್ಷಗಳ ಹಿಂದಿನದ್ದಾಗಿಯಂತೆ. ಇಬ್ಬರೂ ವಿದೇಶದಲ್ಲಿ ವಿಧ್ಯಾಭ್ಯಾಸ ಮಾಡುವಾಗಲೇ ಪರಸ್ಪರ ಪರಿಚಯ ಆಗಿದ್ದು, ಇಬ್ಬರ ನಡುವಿನ ಸ್ನೇಹ ಪ್ರೇಮಕ್ಕೆ ತಿರುಗಿದ್ದು, ಈ ಅಂಬರೀಷ್ ಅವರಿಗೆ ತಿಳಿದಿತ್ತು.

ಹೀಗಾಗಿ ಇಬ್ಬರು ವೃತ್ತಿಜೀವನದಲ್ಲಿ ನೆಲೆ ಕಂಡುಕೊಂಡ ನಂತರ ಮದುವೆ ಮಾತುಕತೆ ನಡೆಸುವುದಾಗಿ ಹೇಳಿದ್ದರು. ಅದರಂತೆ ಅಭಿಷೇಕ್ ಸಿನಿಮಾ ರಂಗಕ್ಕೆ ಪಾದರ್ಪಣೆ ಮಾಡಿದ್ದರು. ಆದರೆ ಇದೀಗ ನಟ ಅಭಿಷೇಕ್ ಅಂಬರೀಶ್ ಅವರು ಪ್ರೀತಿಸಿದ ಹುಡುಗಿಯನ್ನು ಕೈ ಹಿಡಿಯುವ ದಿನ ಹತ್ತಿರ ಬಂದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Leave a Reply

Your email address will not be published. Required fields are marked *