ಕನ್ನಡ ಕಿರುತೆರೆ ಲೋಕದ ಜನಪ್ರಿಯ ಶೋ ಕಾಮಿಡಿ ಕಿಲಾಡಿ ಶೋ (Kiladi Comdey Show) ಮೂಲಕ ಖ್ಯಾತಿಗಳಿಸಿಕೊಂಡವರು ಸಂಜು ಬಸಯ್ಯಾ (Sanju Basayya) ಪ್ರೀತಿಸಿದ ಹುಡುಗಿ ಜೊತೆಗೆ ವೈವಾಹಿಕ ಬದುಕು ಶುರು ಮಾಡಿದ್ದಾರೆ. ನಟ ಸಂಜು ಬಸಯ್ಯ ಪ್ರೀತಿಸಿದ ಹುಡುಗಿ ಪಲ್ಲವಿಯ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಳೆದ ಜುಲೈ 30 ರಂದು ಬೈಲಹೊಂಗಲದ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪ (Shre Veera Bhadreshwara Kalyana Mantapa) ದಲ್ಲಿ ಸಂಜು ಬಸಯ್ಯ ಹಾಗೂ ಪಲ್ಲವಿ ಬಳ್ಳಾರಿಯವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಜೋಡಿಯ ಆರತಕ್ಷತೆಯು ಅದ್ದೂರಿಯಾಗಿಯೇ ನಡೆಯಿತು.ಇದೀಗ ಇದೇ ಜೋಡಿ ಮದುವೆ ಆರತಕ್ಷತೆಯ ಒಂದಷ್ಟು ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದೆ. ಈ ಫೋಟೋಗಳು ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಈ ಜೋಡಿಯನ್ನು ಕಂಡು ಖುಷಿ ಪಟ್ಟಿದ್ದಾರೆ. ಪೋಟೋಗಳನ್ನು ನೋಡಿದ ನೆಟ್ಟಿಗರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ನಟ ಸಂಜು ಬಸಯ್ಯ ಹಾಗೂ ಪಲ್ಲವಿಯವರು ಒಂದೇ ನಾಟಕದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸ್ನೇಹಿತರಾಗಿದ್ದರು. ಈ ಸ್ನೇಹವುಇಬ್ಬರ ಮಧ್ಯೆ ಪ್ರೀತಿ ಚಿಗುರಲು ಕಾರಣವಾಯಿತು. ಕಳೆದ 6 ವರ್ಷಗಳಿಂದ ಪರಸ್ಪರ ಸಂಜು ಬಸಯ್ಯ ಹಾಗೂ ಪಲ್ಲವಿ ಪ್ರೀತಿಸುತ್ತಿದ್ದ ಜೋಡಿಯು ಇತ್ತೀಚೆಗಷ್ಟೇ ತಮ್ಮ ಬಹುಕಾಲದ ಪ್ರೇಯಸಿಯ ಜೊತೆಗೆ ರಿಜಿಸ್ಟರ್ ಮ್ಯಾರೇಜ್ (Register Marriage) ಮಾಡಿಕೊಂಡಿದ್ದರು.
ಸಂಜು ಬಸಯ್ಯ ಹಾಗೂ ಪಲ್ಲವಿ ರಿಜಿಸ್ಟರ್ ಮದುವೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಎಲ್ಲರ ಆರ್ಶಿವಾದವನ್ನು ಕೇಳಿದ್ದರು. “ಕನ್ನಡದ ಕಲಾಭಿಮಾನಿಗಳಿಗೆ ನಿಮ್ಮ ಪ್ರೀತಿಯ ಸಂಜು ಬಸಯ್ಯ ಮತ್ತು ಪಲ್ಲವಿ ಬಳ್ಳಾರಿ ಮಾಡುವ ಅನಂತ ಕೋಟಿ ನಮಸ್ಕಾರಗಳು. ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ಇಂದು ನಾವು ತೆರೆ ಎಳೆದಿದ್ದೇವೆ” ಎಂದಿದ್ದರು.

“ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತು, ಆ ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಯಾಗಿದ್ದು ನಿಮಗೆಲ್ಲರಿಗೂ ಗೊತ್ತಿದ್ದ ವಿಷಯ. ಈಗ ನಾವಿಬ್ಬರು ಕಾನೂನಬದ್ದವಾಗಿ, ಅಧಿಕೃತವಾಗಿ, ರಿಜಿಸ್ಟರ್ ಮ್ಯಾರೇಜ್ ಆಗಿದ್ದೇವೆವೆ. ನಮ್ಮ, ನಮ್ಮ ಕುಟುಂಬದ ಒಪ್ಪಿಗೆ ಪಡೆದು ನಿಮ್ಮೆಲ್ಲರ ಸುಮ್ಮುಖದಲ್ಲಿ ಆದಷ್ಟು ಬೇಗ ಸಪ್ತಪದಿ ತುಳಿಯಲಿದ್ದೇವೆ. ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಮೇಲೆ ಹೀಗೆ ಇರ್ಲಿ. ನಿಜವಾದ ಪ್ರೀತಿಗೆ ಯಾವುದೇ ಜಾತಿ, ಧರ್ಮ, ಇನ್ನಿತರ ಯಾವುದೇ ವಿಷಯಗಳು ಅಡ್ಡ ಬರಲಾರದು ಎಂಬುದನ್ನು ಸಾಧಿಸಿ ತೋರಿಸಿದ್ದೇವೆ. ನಿಜವಾದ ಪ್ರೀತಿಗೆ ಜಯ ಸಿಕ್ಕೆ ಸಿಗುತ್ತದೆ” ಎಂದು ಬರೆದುಕೊಂಡಿದ್ದರು.