ಮದುವೆಗೂ ಮುನ್ನವೇ ಹನಿಮೂನ್ ಗೆ ಹೋದ ಜೋಡಿ ರಶ್ಮಿಕಾ ಮತ್ತು ವಿಜಯ್ .. ಕೊನೆಗೂ ಸಿಕ್ಕಿ ಬಿದ್ದರು ನೋಡಿ.. ಫೋಟೋ ವೈರಲ್

ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಿನಿಮಾದಲ್ಲಿ ಬ್ಯುಸಿಯಾಗಿರುವಾಗಲೇ ಅವರ ಮದುವೆಯ ಸುದ್ದಿಯೊಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ವಿಜಯ್​ ದೇವರಕೊಂಡ (Vijay Devarakonda) ಅವರು ನಟಿ ರಶ್ಮಿಕಾ ಮಂದಣ್ಣ ಜೊತೆ ಡೇಟಿಂಗ್ (Dating) ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಕಳೆದ ಕೆಲವು ವರ್ಷಗಳಿಂದ ಕೇಳಿ ಬರುತ್ತಿವೆ.

ಆದರೆ ಇದೀಗ ಈ ವರ್ಷದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿವೆ. ಹೀಗಿರುವಾಗ ಈ ಜೋಡಿ ವಿದೇಶಿ ಪ್ರವಾಸವನ್ನು ಎಂಜಾಯ್ ಮಾಡುತ್ತಿದೆ. ಸದ್ಯದಲ್ಲೇ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇವರಿಬ್ಬರ ಪ್ರೀತಿಗೆ ಎರಡು ಕುಟುಂಬದವರು ಓಕೆ ಹೇಳಿದ್ದು, ಎಂಗೇಜ್ಮೆಂಟ್ ಮುಂದಿನ ಫೆಬ್ರವರಿ ಎರಡನೇ ವಾರದಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. ಫೆಬ್ರವರಿ 14 ಪ್ರೇಮಿಗಳ ದಿನದಂದು ಎಂಗೇಜ್ ಆಗಲಿದ್ದಾರೆ ಎನ್ನುವ ಮಾತುಗಳುಕೇಳಿ ಬರುತ್ತಿವೆ. ಆದರೆ ಈ ಬಗ್ಗೆ ಈ ಜೋಡಿಯೂ ಸಣ್ಣ ಸುಳಿವನ್ನು ಬಿಟ್ಟುಕೊಟ್ಟಿಲ್ಲ.

ಮದುವೆಯ ಸುದ್ದಿಯೊಂದು ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿರುವಾಗಲೇ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿಯೆಟ್ನಾಂ (Vietnam) ಗೆ ಪ್ರವಾಸ ಕೈಗೊಂಡಿದ್ದಾರೆ. ನಾಟು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ಕಣ್ಣು ಬಾಯಿ ಬಿಟ್ಟು ನೋಡುತ್ತಿದ್ದಾರೆ.

ಈ ಇಬ್ಬರೂ ವಿದೇಶಿ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು ನೆಟ್ಟಿಗರ ಗಮನ ಸೆಳೆಯುತ್ತಿದೆ. ನಟ ವಿಜಯ್ ಇನ್‌ಸ್ಟಾಗ್ರಾಮ್‌ (Instagram) ನಲ್ಲಿ ವಿದೇಶಿ ಟ್ರಿಪ್ ಫೋಟೋಗಳನ್ನು ಹಂಚಿಕೊಂಡಿದ್ದು, ನಟ ಬೀದಿ ಆಹಾರವನ್ನು ತಿಂದು ತುಂಬಾ ನಗುತ್ತಾ ನಿಂತಿದ್ದಾರೆ. ಇತ್ತ ನಟಿ ರಶ್ಮಿಕಾ ಮಂದಣ್ಣ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ ಟೋಪಿ ಧರಿಸಿರುವ ನಟಿ, ಈ ಟೋಪಿ ನನಗೆ ತುಂಬಾ ಇಷ್ಟವಾಯಿತು. ಅದನ್ನು ಮನೆಗೆ ತೆಗೆದುಕೊಂಡು ಹೋಗುತ್ತೇನೆ ಎಂದಿದ್ದಾರೆ.

ಇಬ್ಬರ ಫೋಟೋಗಳನ್ನು ನೆಟ್ಟಿಗರು ಈ ಜೋಡಿಯ ಕಾಲೆಯುಳುತ್ತಿದ್ದಾರೆ. ಇದು ಪ್ರೀ ಹನಿಮೂನಾ ಎಂದು ಕೇಳಿದರೆ, ಇನ್ನು ಕೆಲವರು ಗುಡ್​ನ್ಯೂಸ್​ ಯಾವಾಗ ಎಂದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರೀತಿಯ ವಿಚಾರವಾಗಿ ಸುದ್ದಿಯಾಗುತ್ತಿರುವ ಈ ಜೋಡಿಯು ಮದುವೆಯ ವಿಚಾರಕ್ಕೆ ಸ್ಪಷ್ಟನೆ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕು.

Leave a Reply

Your email address will not be published. Required fields are marked *