ಇತ್ತೀಚೆಗಿನ ದಿನಗಳಲ್ಲಿ ವಿವಿಧ ಬ್ಯಾಂಕ್ ಗಳು ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸುತ್ತಿದೆ. ಇದೀಗ ಸ್ಟೇಟ್ ಆಫ್ ಬ್ಯಾಂಕ್ ಆಫ್ ಇಂಡಿಯಾ (State Bank of India)ವು ಖಾಲಿ ಇರುವ 2000 ಪ್ರೊಬೇಷನರಿ ಹುದ್ದೆಗಳಗ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಇದೇ ಸೆಪ್ಟೆಂಬರ್ 7ರಿಂದ ಆರಂಭವಾಗಿದ್ದು, ಸೆಪ್ಟೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ (online Application) ಸಲ್ಲಿಸಲು ಅವಕಾಶವಿದೆ.

ಸ್ಟೇಟ್ ಆಫ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು sbi.co.in ಹೋಗಬೇಕು. ಅಲ್ಲಿ ಹೋಮ್‌ಪುಟದಲ್ಲಿರುವ PO recruitment ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆ ಬಳಿಕ ಕ್ರೆಡೆನ್ಷಿಯಲ್ ಬಳಸಿಕೊಂಡು ಲಾಗ್ ಇನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
ಈ ಅರ್ಜಿಯ ಜೊತೆಗೆ ಕೇಳಲಾದ ಎಲ್ಲಾ ದಾಖಲೆ (Document) ಗಳನ್ನು ಅಪ್‌ಲೋಡ್ ಮಾಡಬೇಕು. ಅದಲ್ಲದೇ ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕು. ಆ ಬಳಿಕ ಸ್ವೀಕೃತಿ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಮುಂದಿನ ಬಳಕೆಗಾಗಿ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಲವು ಮಾನದಂಡಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು. ಸಂದರ್ಶನದ ವೇಳೆಯಲ್ಲಿ ಪದವಿ (Degree) ಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿ ಓದುತ್ತಿರುವವರು ಇದೇ ಡಿಸೆಂಬರ್ 31, 2023 ರಂದು ಅದಕ್ಕೂ ಮುನ್ನ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ.
ಅದರೊಂದಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸುವರಿಗೆ ವಯೋಮಿತಿಯಿದ್ದು, ವಯಸ್ಸು 21ರಿಂದ 30ರೊಳಗೆ ವಯಸ್ಸು ಆಗಿರಬೇಕು.ಅರ್ಹರು ಅರ್ಜಿ ಸಲ್ಲಿಸುವ ವೇಳೆ ವಿವಿಧ ವರ್ಗದ ಆಧಾರದ ಮೇಲೆ ಶುಲ್ಕವನ್ನು ವಿಧಿಸಲಾಗಿದೆ. ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದವರು ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ಅರ್ಜಿ ಶುಲ್ಕವನ್ನು ನಿಗದು ಪಡಿಸಲಾಗಿದೆ.
ಅರ್ಜಿ ಸಲ್ಲಿಸ ಬಳಿಕ ಸಂದರ್ಶನದಲ್ಲಿ ಭಾಗಿಯಾಗದೇ ಹೋದರೂ ಈ ಶುಲ್ಕವನ್ನು ಮರುಪಾವತಿ ಮಾಡಲಾಗುವುದಿಲ್ಲ. ಇದೇ 2023ರ ನವೆಂಬರ್ ತಿಂಗಳಲ್ಲಿ ಪ್ರಿಲಿಮಿನರಿ ಎಕ್ಸಾಮ್ (Priliminary Exam) ನಡೆಯಲಿದ್ದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿದೆ.