ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ.. ಲೀಲಾವತಿ ಗೆ ಕೊಟ್ಟ ಹಣ ಎಷ್ಟು ಗೊತ್ತಾ ?

ಕನ್ನಡ ಸಿನಿಮಾರಂಗದ ಹಿರಿಯ ನಟಿ ಲೀಲಾವತಿ (Leelavati) ಯವರು ವಯೋಸಹಜ ಖಾ-ಯಿಲೆಯಿಂದ ಬಳಲುತ್ತಿದ್ದಾರೆ. ಹಲವು ದಿನಗಳಿಂದ ಅವರಿಗೆ ಕೃತಕ ಉಸಿರಾಟ ನೀಡಲಾಗುತ್ತಿದ್ದು, ಸದ್ಯಕ್ಕೆ ವಿನೋದ್ ರಾಜ್ (Vinod Raj) ಅವರು ತಾಯಿಯನ್ನು ಮಗುವಿನಂತೆ ಆರೈಕೆ ಮಾಡುತ್ತಿದ್ದಾರೆ. ಹಿರಿಯ ನಟಿ ಲೀಲಾವತಿಯವರ ಯೋಗ ಕ್ಷೇಮ ವಿಚಾರಿಸಲು ಚಿತ್ರೋದ್ಯಮದ ಅನೇಕ ಗಣ್ಯರು ಲೀಲಾವತಿ ಅವರ ಮನೆಗೆ ಬರುತ್ತಿದ್ದಾರೆ.

ಈಗಾಗಲೇ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ (Shivaraj Kumar and Geetha Shivaraj kumar), ಅರ್ಜುನ್ ಸರ್ಜಾ (Arjun Sarja), ದರ್ಶನ್ (Darshan) , ಡಿ.ಕೆ.ಶಿವಕುಮಾರ್ (DK Shivarajkumar) ಸೇರಿದಂತೆ ಹಲವರು ಲೀಲಾವತಿರವರ ಆರೋಗ್ಯವನ್ನು ವಿಚಾರಿಸಿ ವಿನೋದ್ ರಾಜ್ ಅವರಿಗೆ ಧೈರ್ಯ ತುಂಬಿದ್ದಾರೆ. ಇಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ (CM Siddaramayya) ನವರು, ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ಆ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, “ಲೀಲಾವತಿ ಯವರು ಚೆನ್ನಾಗಿದ್ದ ಸಂದರ್ಭದಲ್ಲಿ ಜಮೀನು ವಿಚಾರವಾಗಿ ಇದ್ದ ತೊಂದರೆ ಬಗೆಹರಿಸಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಆಸ್ಪತ್ರೆಗೆ ಸೇರಿಸಿದರೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದೇನೆ” ಎಂದಿದ್ದಾರೆ.

“ಲೀಲಾವತಿ ಯವರು ಒಬ್ಬ ನೈಜ ಪ್ರತಿಭೆಯಿದ್ದ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ಚೆನ್ನಾಗಿ ನೋಡಿಕೊಳ್ಳಲಿ ಎಂದು ಹೇಳಿದ್ದೇನೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಒದಗಿಸುವುದಾಗಿ ತಿಳಿಸಿದ್ದೇನೆ ಎಂದರು. ರೈತರ ಪರವಾಗಿ ಲೀಲಾವತಿ ಗಟ್ಟಿಯಾದ ನಿಲುವು ಹೊಂದಿದ್ದರು. ಈಗಾಲೂ ಅವರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಕನ್ನಡ ಸಿನಿಮಾರಂಗ ಕಂಡ ಅದ್ಭುತ ಪ್ರತಿಭೆ ಈ ಲೀಲಾವತಿ. ಒಂದು ಕಾಲದಲ್ಲಿ ಸಿನಿಮಾರಂಗದಲ್ಲಿ ತಮ್ಮ ನಟನೆಯಿಂದಲೇ ಅಭಿಮಾನಿಗಳ ಮನಸ್ಸನ್ನು ಗೆದ್ದುಕೊಂಡವರು ಈ ಲೀಲಾವತಿ. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂನ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 400 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರ ಪ್ರೀತಿಗೆ ಪಾತ್ರರಾದವರು ಈ ಹಿರಿಯ ನಟಿ ಲೀಲಾವತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

Leave a Reply

Your email address will not be published. Required fields are marked *