ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ, ಹೊರ ಬಿತ್ತು ಡೇಟ್ ಯಾವಾಗ ನೋಡಿ!!

ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ (Rashmika Mandanna) ನವರು ಸಿನಿಮಾಕ್ಕಿಂತ ಹೆಚ್ಚಾಗಿ ಇನ್ನಿತ್ತರ ವಿಚಾರಗಳಿಂದ ಸುದ್ದಿಯಾಗುವುದೇ ಹೆಚ್ಚು. ಅದರಲ್ಲಿಯು ನಟ ವಿಜಯ್ ದೇವರಕೊಂಡ (Vijay Devarakonda) ರವರ ಜೊತೆಗೆ ಏನೋ ಇದೆ ಎನ್ನುವ ಮೂಲಕ ಆಗಾಗ ಸುದ್ದಿಯಲ್ಲಿರುತ್ತಾರೆ. ಇವರಿಬ್ಬರ ನಡುವಿನ ರಿಲೇಷನ್ಶಿಪ್ ಇದೆ ಎನ್ನುವ ಗಾಸಿಪ್ ನಿನ್ನೆ ಮೊನ್ನೆದಲ್ಲ, ಕಳೆದ ಕೆಲವು ವರ್ಷಗಳಿಂದಲೂ ಈ ಜೋಡಿ ಪ್ರೀತಿಯಲ್ಲಿದ್ದಾರೆ ಎನ್ನುವ ಮಾತುಗಳು ಇವೆ.

ಇದೀಗ ವಿಜಯ್ ಗೆಳತಿ ರಶ್ಮಿಕಾ ಜೊತೆ ನಿಶ್ಚಿತಾರ್ಥ (Engegment) ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆದರೆ ಕಳೆದ ಕೆಲವು ದಿನಗಳ ರಶ್ಮಿಕಾ ಮಂದಣ್ಣನವರ ವೈವಾಹಿಕ ಜೀವನದ ಕುರಿತು ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ (Venu Swami) ಭವಿಷ್ಯವೊಂದನ್ನು ನುಡಿದಿದ್ದರು. ಇತ್ತೀಚೆಗಷ್ಟೇ ಯೂಟ್ಯೂಬ್ ಚಾನೆಲ್ ​ಗೆ ನೀಡಿದ ಸಂದರ್ಶನವೊಂದರಲ್ಲಿ ರಶ್ಮಿಕಾ ಹಾಗೂ ವಿಜಯ್​ ದೇವರಕೊಂಡರವರ ಬಗ್ಗೆ ಮಾತನಾಡಿದ್ದರು.

ಈ ವೇಳೆಯಲ್ಲಿ ವೇಣು ಸ್ವಾಮಿ, ”ರಶ್ಮಿಕಾ ಹಾಗೂ ವಿಜಯ್ ದೇವರೊಂಡ ಪರಸ್ಪರ ಪ್ರೀತಿಯಲ್ಲಿರುವುದು ಗುಟ್ಟೇನೂ ಅಲ್ಲ. ಅವರಿಬ್ಬರು ವಿವಾಹ ಆಗಲಿದ್ದಾರೆ. ಆದರೆ ವಿವಾಹವಾದ ಬಳಿಕ ಇಬ್ಬರೂ ದೂರಾಗಲಿದ್ದಾರೆ. ಇದು ಖಚಿತ. ವಿಜಯ್ ದೇವರಕೊಂಡ ಜೊತೆ ಮದುವೆಯಾದರೆ ವಿ-ಚ್ಛೇದನ ಆಗಲಿದೆ ಎಂದು ನಾನು ನೇರವಾಗಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿದ್ದೇನೆ ” ಎಂದಿದ್ದರು.

“ಇದೇ ಕಾರಣಕ್ಕೆ ಅವರು ನನ್ನೊಂದಿಗೆ ಮಾತನಾಡುವುದು ಬಿಟ್ಟು, ನನ್ನ ಸಂಪರ್ಕ ಕಡಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಸಮಾಜಕ್ಕೆ ನಾಯಕಿ ಆಗಿರಬಹುದು ಆದರೆ ನನಗೆ ಕೇವಲ ಕ್ಲೈಂಟ್ ಅಷ್ಟೆ. ಅವರ ಜನಪ್ರಿಯತೆ ನೋಡಿ ನಾನು ಭವಿಷ್ಯ ಹೇಳುವುದಿಲ್ಲ, ಅವರ ಗ್ರಹಗತಿ ನೋಡಿ ಭವಿಷ್ಯ ಹೇಳುತ್ತೇನೆ. ನಾನು ಹೇಳಿದ ನಿಜ ಅವರಿಗೆ ಹಿಡಿಸಲಿಲ್ಲ, ಇರಲಿ ಪರವಾಗಿಲ್ಲ, ಆದರೆ ಅವರಿಬ್ಬರು ಮದುವೆಯಾಗಿ ದೂರಾಗುವುದು ಖಚಿತ” ಎಂದು ಹೇಳಿದ್ದರು.

ಆದರೆ ಈ ಜೋಡಿ ಸದ್ಯದಲ್ಲೇ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ಅದಕ್ಕೂ ಮುಂಚೆ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇವರಿಬ್ಬರ ಪ್ರೀತಿಗೆ ಎರಡು ಕುಟುಂಬದವರು ಓಕೆ ಹೇಳಿದ್ದಾರಂತೆ. ಹೀಗಾಗಿ ಎಂಗೇಜ್ಮೆಂಟ್ ಕಾರ್ಯಕ್ರಮವು ಮುಂದಿನ ಫೆಬ್ರವರಿ ಎರಡನೇ ವಾರದಲ್ಲಿ ನಡೆಯಲಿದೆ. ಪ್ರೇಮಿಗಳ ದಿನದಂದು ಎಂಗೇಜ್ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಆದರೆ ಜ್ಯೋತಿಷಿ ವೇಣು ಸ್ವಾಮಿಯವರ ನುಡಿದ ಭವಿಷ್ಯವನ್ನು ಮೀರಿ ವಿಜಯ್ ದೇವರಕೊಂಡರವರನ್ನು ಕೈ ಹಿಡಿಯಲಿದ್ದಾರಾ ಎನ್ನುವ ಪ್ರಶ್ನೆಗೆ ಸದ್ಯಕ್ಕಿದೆ. ಇನ್ನೊಂದೆಡೆ ಎಂಗೇಜ್ಮೆಂಟ್ ಸುದ್ದಿಯೊಂದು ಹರಿದಾಡುತ್ತಿದ್ದು , ಈ ಜೋಡಿಯೇ ಈ ಬಗ್ಗೆ ಸ್ಪಷ್ಟನೆಯನ್ನು ನೀಡಬೇಕಾಗಿದೆ.

Leave a Reply

Your email address will not be published. Required fields are marked *