ಇನ್ಮೇಲೆ ಕರ್ನಾಟಕದಲ್ಲಿ ಉಚಿತ ಲ್ಯಾಪ್‌ಟಾಪ್ ಸಿಗುತ್ತದೆ, ಯಾರೆಲ್ಲಾ ಈ ಯೋಜನೆಯ ಫಲಾನುಭವಿಗಳಾಗಲು? ಯಾರು ಅರ್ಹರು?

ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದಾಗಿ ಶೈಕ್ಷಣಿಕವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಸರ್ಕಾರವು ಉಚಿತವಾಗಿ ಲ್ಯಾಪ್ ಟಾಪ್ (Laptop) ನೀಡುವ ಯೋಜನೆ (Scheme) ಯನ್ನು ಜಾರಿಗೆ ತಂದಿದ್ದು, 12 ನೇ ತರಗತಿ ಅಥವಾ ದ್ವಿತೀಯ ಪಿಯುಸಿ (Second PUC) ಉತ್ತೀರ್ಣರಾಗಿದ್ದರೆ, ಕರ್ನಾಟಕ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ dce.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಅಂದರೆ, ಪ್ರತಿಷ್ಠಿತ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು, ವೈದ್ಯಕೀಯ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್‌ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಓದುತ್ತಿರುವವರು ಈ ಯೋಜನೆಯ ಸದುಪಯೋಗವನ್ನು ಪಡೆಯಬಹುದು.

ಅದಲ್ಲದೇ ರಾಜ್ಯದಲ್ಲಿರುವ ಎಸ್‌ಟಿ (ST) ಮತ್ತು ಎಸ್‌ಸಿ (ST) ವರ್ಗಗಳಿಗೆ ಸೇರಿದ 1.50 ಲಕ್ಷಕ್ಕೂ ಹೆಚ್ಚು ಕರ್ನಾಟಕದ ವಿದ್ಯಾರ್ಥಿಗಳು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸುಮಾರು 32,000 ರೂಪಾಯಿಯಿಂದ 35,000 ರೂಪಾಯಿ ಮೌಲ್ಯದ ಲ್ಯಾಪ್‌ಟಾಪ್ ವಿತರಣೆ (Laptop Distribution) ಮಾಡಲಾಗುತ್ತದೆ.

ಉಚಿತ ಲ್ಯಾಪ್ ಟಾಪ್ ಯೋಜನೆ (Free Laptop Scheme) ಗೆ ಅರ್ಜಿ ಸಲ್ಲಿಸಲು ಬಯಸುವವರು ಈ ಎಲ್ಲಾ ಅರ್ಹತೆಗಳನ್ನು ಹೊಂದಿರಲೇಬೇಕು. ಮೊದಲಿಗೆ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಎರಡನೇಯದಾಗಿ ಅರ್ಜಿದಾರರು ಯಾವುದೇ ವರ್ಗ ಅಥವಾ ಯಾವುದೇ ಹಿಂದುಳಿದ ವರ್ಗದವರಾಗಿರಬಹುದು.

ವಿದ್ಯಾರ್ಥಿಯು 12 ನೇ ತರಗತಿ ಅಥವಾ ದ್ವಿತೀಯ ಪಿಯುಸಿಯನ್ನು ಉತ್ತಮ ಶ್ರೇಣಿ ಹಾಗೂ ಅಂಕಗಳೊಂದಿಗೆ ಪಾಸಾಗಿರಬೇಕು.ಅದಲ್ಲದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕರ್ನಾಟಕದ ನಿವಾಸ ಪ್ರಮಾಣಪತ್ರ (Residence certificate) , ಗುರುತಿನ ಚೀಟಿಗಾಗಿ ಆಧಾರ್ ಕಾರ್ಡ್ (Aadhaar card) , ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆ ಮಾಹಿತಿ (Bank Account Details), ಜಾತಿ ಪ್ರಮಾಣ ಪತ್ರ (Caste Certificate), ಆದಾಯ ಪ್ರಮಾಣಪತ್ರ (Income Certificate), ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ (Passport Size Photo), ಶೈಕ್ಷಣಿಕ ಪ್ರಮಾಣಪತ್ರ (Education Certificate) ಮುಂತಾದ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಲೇಬೇಕು.

ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿ ಅಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು ಆಯಾ ವೃತ್ತ ಕಛೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿ ಜೊತೆಗೆ, ಅರ್ಜಿ ಸ್ವೀಕರಿಸಿದ ಕಚೇರಿಗೆ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನವಾಗಿದೆ. ಈ ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ ಕಚೇರಿ, ಉಪ ವಿಭಾಗ-1, ಬೆಂಗಳೂರು. ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಕಟ್ಟಡ, ಮೊದಲ ಮಹಡಿ, ಮಂಜುನಾಥ ನಗರ ಬಾಗಲಗುಂಟೆ ಬೆಂಗಳೂರು -73 ಈ ವಿಳಾಸವನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *