ಉದ್ಯೋಗ ಹುಡುಕುವ ಯುವಕ ಯುವತಿಯರಿಗಾಗಿಯೇ ಅನೇಕ ಸಂಸ್ಥೆಗಳು ಹಾಗೂ ಬ್ಯಾಂಕ್ (Bank) ಗಳು ಅರ್ಜಿಯನ್ನು ಆಹ್ವಾನಿಸುತ್ತವೆ. ಆದರೆ ಇದೀಗ ಐಡಿಬಿಐ ಬ್ಯಾಂಕ್ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ (IDBI Bank Junior Aasistent Manager Post)ಗೆ ಸೆಪ್ಟೆಂಬರ್ 15 ರಂದು ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.
ಅಪ್ಲಿಕೇಶನ್ ಪ್ರಕ್ರಿಯೆಗೆ ಸೆಪ್ಟೆಂಬರ್ 30 (September 30) ರಂದು ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು idbibank.in ನಲ್ಲಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ (Online) ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಬಿಐ ಬ್ಯಾಂಕ್ ನಲ್ಲಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿಯಿವೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗಾಗಿ ಆನ್‌ಲೈನ್ ಪರೀಕ್ಷೆ (Online Exam) ಯನ್ನು ಅಕ್ಟೋಬರ್ 20, 2023 ರಂದು ನಡೆಸಲು ನಿರ್ಧಾರ ಮಾಡಲಾಗಿದೆ. ಐಡಿಬಿಐ ನೇಮಕಾತಿ 2023 ವಯಸ್ಸಿನ ಮಿತಿಯನ್ನು ವಿಧಿಸಲಾಗಿದೆ.
ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಮತ್ತು ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ವರ್ಷ ವಯಸ್ಸಾಗಿರಬೇಕು. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ ಆನ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಿಂದ ಪದವಿ (Degree) ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದ್ದು, ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 200 ರೂಪಾಯಿ ಹಾಗೂ ಇತರ ಅಭ್ಯರ್ಥಿಗಳಿಗೆ 1000 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ.