ಕನ್ನಡದ ರೀಲ್ಸ್ ಸ್ಟಾರ್‌ಗಳಾಗಿ ಫೇಮಸ್ ಆಗಿದ್ದ ವರ್ಷ ಕಾವೇರಿ (Varsha Kaveri)- ವರುಣ್ ಆರಾಧ್ಯ (Varun Aradhya) ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದರು. ಈಗಾಗಲೇ ಇಬ್ಬರೂ ಜೊತೆಯಾಗಿಯೇ ಸಾಕಷ್ಟು ರೀಲ್ಸ್ ಗಳನ್ನು ಮಾಡಿದ್ದು ಈ ಜೋಡಿಗೆ ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ಫಾಲ್ಲೋರ್ಸ್ ರನ್ನು ಹೊಂದಿದ್ದಾರೆ.
ಯಾವಾಗಲೂ ಜೊತೆಯಾಗಿದ್ದ ವರ್ಷ ಹಾಗೂ ವರುಣ್ ಈ ಇಬ್ಬರೂ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೌದು, ಈ ಬಾರಿಯ ಬಿಗ್ ಬಾಸ್ ಸೀಸನ್ 10ಕ್ಕೆ (Bigg Boss Kannada 10) ವರ್ಷ-ವರುಣ್ ಜೋಡಿಯಾಗಿ ಬರುತ್ತಾರೆ ಎನ್ನುವ ವಿಚಾರವೊಂದು ಸುದ್ದಿಯಾಗಿತ್ತು.

ಹೀಗಿರುವಾಗ ವರ್ಷ ತಮ್ಮಿಬ್ಬರ ಸಂಬಂಧವು ಮುರಿದು ಬಿದ್ದಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಲವ್ ಬ್ರೇಕಪ್ ವಿಚಾರವಾಗಿ ವರ್ಷಾ ಕಾವೇರಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದು, “ಎಲ್ಲರಿಗೂ ನಮಸ್ಕಾರ, ತುಂಬಾ ದಿನದಿಂದ ನೀವೆಲ್ಲ ನನಗೆ ಕೇಳಿದ್ದಂತಹ ಸಾಮಾನ್ಯ ಪ್ರಶ್ನೆ ಏನೆಂದರೆ ನಿನಗೂ, ವರುಣ್‌ಗೂ ಏನಾಯಿತೆಂದು. ಆ ವಿಷಯದ ಬಗ್ಗೆ ನಾನು ಇವತ್ತು ಮಾತನಾಡಲು ಮುಂದೆ ಬಂದಿದ್ದೇನೆ. ನಿಮಗೆಲ್ಲ ಗೊತ್ತಿರುವ ವಿಷಯ ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಅವನು ಸಹ ನನ್ನ ಬಿಟ್ಟು ಬೇರೆ ಹುಡುಗಿಯ ಜೊತೆ ಪ್ರೀತಿಯನ್ನು ಇಟ್ಟುಕೊಂಡಿದ್ದ.
ನನಗೆ ಆ ಹುಡುಗಿಯ ಹೆಸರು ಹೇಳಲು ಇಷ್ಟವಿಲ್ಲ. ಏಕೆಂದರೆ ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳ ಜೀವನವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ಈ ವಿಷಯಕ್ಕಾಗಿ ಹಲವಾರು ಬಾರಿ ನನ್ನ- ವರುಣ್ (Varun) ಮಧ್ಯೆ ಮನಸ್ತಾಪಗಳು ಆಗಿತ್ತು. ನಾನು ಎಷ್ಟೇ ಹೇಳಿದರೂ ಸಹ ಅವನು ಆ ಹುಡುಗಿಯನ್ನು ಬಿಡೋದಿಕ್ಕೆ ತಯಾರಿರಲಿಲ್ಲ. ಆದ್ದರಿಂದ ಅವನೇ ಹೇಳಿದ ಹಾಗೆ ನನಗೆ ನಿನ್ನನ್ನು ಪ್ರೀತಿಸಲು ಇಷ್ಟವಿಲ್ಲ ಎಂದು ತಿಳಿಸಿದ್ದ.
ನಾನು ಆ ಹುಡುಗಿಯ ಜೊತೆ ನನ್ನ ಜೀವನವನ್ನು ನಡೆಸಲು ನಿರ್ಧರಿಸುತ್ತೇನೆ ಎಂದು ಹೇಳಿದಾಗ ನನ್ನ ಮನಸ್ಸಿಗೆ ತುಂಬ ನೋವಾಯ್ತು. ಆದ್ದರಿಂದ ನಾನು ಕಳೆದ ಎರಡು ತಿಂಗಳಿಂದ ನನ್ನ, ವರುಣ್ ವಿಡಿಯೋಗಳನ್ನು ಅಪ್‌ಲೋಡ್ ಮಾಡ್ತಿಲ್ಲ. ನಮ್ಮನ್ನು ಪ್ರೀತಿಸುವ ಜನಗಳಿಗೆ ಹೇಳದಿದ್ರೆ ನನಗೆ ನಾನೇ ಮೋಸ ಮಡಿಕೊಳ್ತೀನಿ ಅಂತ ಮನಸ್ಸಿಗೆ ಅನಿಸಿದೆ. ಆದ್ದರಿಂದ ನಾನು ಇವತ್ತು ನಿಮ್ಮ ಮುಂದೆ ಈ ವಿಷಯವನ್ನು ಹೇಳಿಕೊಳ್ಳಲು ಇಷ್ಟಪಡ್ತಿದ್ದೀನಿ.
ಇನ್ನು ಮುಂದೆ ನನ್ನ ವರುಣ್ ಮಧ್ಯೆ ಯಾವುದೇ ರೀತಿಯ ಪ್ರೀತಿ ಸಂಬಂಧ ಇರೋದಿಲ್ಲ. ಅವನು ಆ ಹುಡುಗಿ ಜೊತೆ ಖುಷಿಯಾಗಿರಲಿ. ನನ್ನನ್ನು ನಂಬಿಕೊಂಡು ನನ್ನ ಕುಟುಂಬ ಇದೆ, ನಾನು ಅವರಿಗಾಗಿ ಜೀವನವನ್ನು ನಡೆಸಬೇಕು, ಆದ್ದರಿಂದ ನಿಮಗೆ ಹೇಳಬೇಕು ಅನಿಸಿದ್ದನ್ನು ನಾನು ಹೇಳಿದ್ದೇನೆ, ಇನ್ನು ಮುಂದೆ ನನ್ನ ಜೀವನ ನನ್ನ ಇಷ್ಟದಂತೆ ನಡೆಯುತ್ತದೆ.
ಅದನ್ನು ನೀವು ಅರ್ಥ ಮಾಡಿಕೊಳ್ಳಿರಿ ಎಂದು ನಾನು ಭಾವಿಸಿರುವೆ. ಇದು ಯಾವುದೇ ಫ್ರ್ಯಾಂಕ್ ಅಲ್ಲ, ಕಳೆದ 2 ತಿಂಗಳುಗಳಿಂದ ನಾನು ಇದನ್ನೂ ಫೇಸ್ ಮಾಡುತ್ತಿದ್ದೇನೆ ಎಂದು ಎಲ್ಲವನ್ನು ಸ್ಪಷ್ಟವಾಗಿ ಬರೆದುಕೊಂಡಿದ್ದಾರೆ. ರೀಲ್ಸ್ ಸ್ಟಾರ್ ವರ್ಷ ನೋಡಿದ ಫ್ಯಾನ್ಸ್ ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ಈ ಬ್ರೇಕಪ್ ವಿಚಾರದ ಬಗ್ಗೆ ವರುಣ್ ಯಾವುದೇ ಪ್ರತಿಕ್ರಿಯೆ ನೀಡದೇದೇ ಮೌನ ವಹಿಸಿದ್ದಾರೆ.