ಕೆಲವು ದಿನಗಳಿಂದ ಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳು ಸುದ್ದಿಯಲ್ಲಿದ್ದಾರೆ. ಪರಸ್ಪರ ಆರೋಪ – ಪ್ರತ್ಯಾರೋಪಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ಕೆಲ ದಿನಗಳ ಹಿಂದೆ, ಸಾಮಾಜಿಕ ಜಾಲತಾಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ಪೋಸ್ಟ್ ವಾರ್ ಜೋರಾಗಿಯೇ ಇತ್ತು.
ಐಪಿಎಸ್ ಅಧಿಕಾರಿ ಡಿ. ರೂಪ ಅವರು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡಿದ್ದರು. ಆದಾದ ಬಳಿಕ ರೂಪಾ ಡಿಯವರು ಮತ್ತೊಂದು ಪೋಸ್ಟ್ ಶೇರ್ ಮಾಡಿಕೊಂಡಿದ್ದು, ಇದರಲ್ಲಿ ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳಿತ್ತು. ಸೋಶಿಯಲ್ ಮೀಡಿಯಾದಲ್ಲಿ ಡಿ. ರೂಪ ಅವರು ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಫೋಸ್ಟ್ ಮಾಡಿದ್ದು, ಈ ರೀತಿಯ ಪಿಕ್ಚರ್ಸ್ ನಾರ್ಮಲ್ ಅನ್ನಿಸಬಹುದು.
ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳನ್ನು ಒನ್ ಟು ಒನ್ ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ ಪ್ರೈವೇಟ್ ಮ್ಯಾಟರ್ ಆಗುವುದಿಲ್ಲ. ಐಎಎಸ್ ಸರ್ವಿಸ್ ಕಂಡಕ್ಟರ್ ರೂಲ್ಸ್ ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ಇನ್ವೆಸ್ಟಿಗೇಟ್ ಮಾಡಬಹುದು.
ಸಲೂನ್ ಹೇರ್ ಕಟ್ ಚಿತ್ರ , ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. ನಾರ್ಮಲ್ ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ ಸ್ಪೀಕ್ಸ್ ಅಧರ್ ವೈಸ್ . ಎಂದು ತಮ್ಮ ಫೋಸ್ಟ್ನಲ್ಲಿ ಬರೆದುಕೊಂಡಿದ್ದರು. ಆದಾದ ಬಳಿಕ ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಭೇಟಿಯಾಗಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ದೂರು ನೀಡಿದ್ದರು.
ಸಿಎಸ್ ಭೇಟಿ ಬಳಿಕ ರೋಹಿಣಿ ಸಿಂಧೂರಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಮಾಧ್ಯಮಗಳ ಮುಂದೆ ಹೋಗಬಾರದು. ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದರು. ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿದೆ. ರೂಪಾ ಆರೋಪಗಳ ಬಗ್ಗೆ ಸಿ.ಎಸ್‌ಗೆ ತಿಳಿಸಿದ್ದೇನೆ. ಅವರು ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ನಾನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ.
ಸಾಮಾಜಿಕ ಜಾಲ ತಾಣದಲ್ಲಿ ಸುಳ್ಳು ಆರೋಪ ಮಾಡಬಾರದು ಎಂದು ಹೇಳಿದ್ದರು. ರಾಜ್ಯ ಸರ್ಕಾರವು ಪೂರ್ಣ ವಿರಾಮವಿಡುವ ಮೂಲಕ ವರ್ಗಾವಣೆ ಮಾಡಿದೆ. ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ರೂಪಾ ಅವರ ಪತಿ ಮನೀಷ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಿದೆ. ನಿಯಮ ಮೀರಿ ವರ್ತನೆ ತೋರಿದ್ದ ರಾಜ್ಯದ ಉನ್ನತ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಡಿ ರೂಪಾ ಅವರಿಗೆ ಸರ್ಕಾರ ವರ್ಗಾವಣೆ ಮಾಡಿದ್ದರೂ, ಸ್ಥಳ ನಿಯೋಜನೆ ಮಾಡಿಲ್ಲ.
ರೂಪಾರವರ ಪತಿ ಮನೀಷ್ ಮೌದ್ಗಿಲ್‌ಗೆ ಸ್ಥಳ ನಿಗದಿ ಮಾಡಿದೆ. ಆದರೆ ಇವರಿಬ್ಬರ ನಡುವಿನ ಜಟಾಪಟಿಯು ನಿಲ್ಲುವಂತೆ ಕಾಣುತ್ತಿಲ್ಲ. ಆದರೆ ಇದೀಗ ಸಿಂಧೂರಿ-ರೂಪಾ ಫೈಟ್ಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅಧಿಕಾರಿಗಳ ನಡುವಿನ ಸಂಘರ್ಷವು ಕಾನೂನು ಹೋರಾಟದ ತಿರುವು ಪಡೆದಿದ್ದು, ರೋಹಿಣಿ ಸಿಂಧೂರಿ ಕಡೆಯಿಂದ ಡಿ.ರೂಪಾಗೆ ಲೀಗಲ್ ನೊಟೀಸ್ ನೀಡಲಾಗಿದೆ.
ಹೌದು, ಹಿರಿಯ ವಕೀಲ ಸಿ.ವಿ ನಾಗೇಶ್ ಮೂಲಕ ಲೀಗಲ್ ನೊಟೀಸ್ ನೀಡಿದ್ದು, ಲೀಗಲ್ ನೊಟೀಸ್ ಒಟ್ಟು 21 ಅಂಶಗಳನನ್ನು ಮುಂದಿಟ್ಟಿದೆ. ರೋಹಿಣಿ ಸಿಂಧೂರಿ ಈ 21 ಅಂಶಗಳನ್ನು ಪಾಲಿಸದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ನೊಟೀಸ್ ಕೊಟ್ಟಿದ್ದಾರೆ. 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೊಟೀಸ್ ನೀಡಿದ್ದಾರೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಜಟಾಪಟಿಯು ಮುಂಬರುವ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕು.