ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ವಾ? ಹಾಗಾದ್ರೆ ಈ ಎಲ್ಲಾ ಕೆಲಸಗಳನ್ನು ಮೊದಲು ಮಾಡಿ, ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ (State Government Gurantee Scheme) ಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಕೂಡ ಈಗ ಜಾರಿಗೆ ಬಂದಿದ್ದು ಈಗಾಗಲೇ ಅನೇಕ ಮಹಿಳೆಯರ ಖಾತೆಗೆ ಹಣವು ಜಮಾ ಆಗಿದೆ. ಹೌದು, ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮನೆ ಯಜಮಾನಿಯರಿಗೆ 2000 ಸಹಾಯ ಧನವನ್ನು ಪಡೆದುಕೊಂಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 44.52 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಇನ್ನು ಉಳಿದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರೂ ಕೂಡಹಣ ಜಮಾ ಆಗಿಲ್ಲ. ರೇಷನ್ ಕಾರ್ಡ್ (Ration Card) ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಕುಟುಂಬದ ಹಿರಿಯ ಮಹಿಳೆ ಹೆಸರು ಇದ್ದರೆ ಮಾತ್ರ ಅಂತಹವರು ಈ ಗೃಹ ಲಕ್ಷ್ಮಿ ಯೋಜನೆಯನ್ನು ಪಡೆಯಬಹುದು.

ಆಧಾರ್ ಕಾರ್ಡ್ (Aadhar Card) ಯಾವ ಬ್ಯಾಂಕ್ ಖಾತೆ (Bank Account) ಗೆ ಲಿಂಕ್ ಆಗಿರಬೇಕು. ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಮಾತ್ರ ಹಣ ಜಮಾ ಆಗುತ್ತದೆ. ಹೌದು, ಹಣದ ಮೊತ್ತವು ಬ್ಯಾಂಕ್ ಖಾತೆಗೆ ಜಮಾ ಆಗದ ಮಹಿಳೆಯರು ಆ ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Department of Women and Child Welfare) ಯು ಮಾಹಿತಿಯನ್ನು ನೀಡಿದೆ.

ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಬೀಳಬೇಕಾದರೆ ಈ ಕೆಳಗಿನ ಕೆಲಸಗಳನ್ನು ತಪ್ಪದೇ ಮಾಡಲೇಬೇಕು. ಸಮೀಪದ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯ ಸಹಾಯದಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು. ಈ ವೇಳೆಯಲ್ಲಿ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕಾಗುತ್ತದೆ.

KYC ಆಗದೇ ಹೋಗಿದ್ದಲ್ಲಿ ನ್ಯಾಯ ಬೆಲೆ ಅಂಗಡಿಗೆ ತೆರಳಿ KYC ಅಪ್ಡೇಟ್ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ಬದಲಾವಣೆಗಳು ಇದ್ದರೆ ಸರಿಪಡಿಸಿಕೊಳ್ಳುವುದು ಸೂಕ್ತ. ಇನ್ನು ಅದರೊಂದಿಗೆ ಆಧಾರ್ ಕಾರ್ಡ್ ಲಿಂಕ್ (Aadhar Card Link), NPCI ಮ್ಯಾಪಿಂಗ್ ಮಾಡಿಸುವುದು ಕೂಡ ಅಗತ್ಯವಾಗಿದೆ.

ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಮಾಡಿಸಲು ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ, NPCI ಮ್ಯಾಪಿಂಗ್ ಮಾಡಿಕೊಳ್ಳಬೇಕು. ಈ ಮೇಲಿನ ಎಲ್ಲಾ ಕೆಲಸವನ್ನು ಮಾಡಿದರೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 2000 ರೂಪಾಯಿ ಖಾತೆಗೆ ಜಮಾ ಆಗುವುದರಲ್ಲಿ ಯಾವುದೇ ಡೌಟ್ ಇಲ್ಲ.

Leave a Reply

Your email address will not be published. Required fields are marked *