ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥದ ಸುದ್ದಿಗೆ ಕೊನೆಗೂ ಬಿತ್ತು ಬ್ರೇಕ್, ಮೌನ ಮುರಿದ ನಟ ಏನು ಹೇಳಿದ್ರು ಗೊತ್ತಾ?

ಕನ್ನಡದ ಕಿರಿಕ್ ಪಾರ್ಟಿ (Kirik Party) ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಬೆಡಗಿ ರಶ್ಮಿಕಾ ಮಂದಣ್ಣರವರಿಗೆ ಪರಭಾಷೆಯ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹೌದು, ಕಿರಿಕ್ ಪಾರ್ಟಿ ಸಿನಿಮಾದ ಬಳಿಕ ಟಾಲಿವುಡ್ (Tollywood) ಹಾಗೂ ಬಾಲಿವುಡ್ (Bollywood) ನಲ್ಲಿ ನಟಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿಯು ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ನಟಿ ರಶ್ಮಿಕಾ ಮಂದಣ್ಣ ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ ರಶ್ಮಿಕಾ ಮಂದಣ್ಣ ಶೇರ್ ಮಾಡಿಕೊಳ್ಳುವ ಫೋಟೋ ಹಾಗೂ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುವುದಿದೆ. ಕೆಲವೊಮ್ಮೆ ಈ ಫೋಟೋ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡೇ ನೆಟ್ಟಿಗರು ಕೂಡ ಟ್ರೋಲ್ ಮಾಡುತ್ತಿರುತ್ತಾರೆ.

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡರವರ ಸಂಬಂಧದ ಕುರಿತಾದ ಸುದ್ದಿಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ.ಆದರೆ ಕೆಲದಿನಗಳಿಂದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಾಗಿದ್ದಾರೆ. ಬರುವ ಫೆಬ್ರವರಿ ತಿಂಗಳಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಲೇ ಇದೆ.

ಆದರೆ ಈ ಬಗ್ಗೆ ಈ ಜೋಡಿ ಬಾಯಿಬಿಟ್ಟಿರಲಿಲ್ಲ. ಆದರೆ ಕೊನೆಗೂ ನಟ ವಿಜಯ್ ದೇವರಕೊಂಡ ಅವರೇ ಮೌನ ಮುರಿದಿದ್ದಾರೆ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ರಶ್ಮಿಕಾ ಮಂದಣ್ಣ ಜೊತೆಗಿನ ನಿಶ್ಚಿತಾರ್ಥದ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆಯಾಗುವುದಿಲ್ಲ. ಮೀಡಿಯಾದವರು ನನ್ನನ್ನು ಎರಡು ವರ್ಷಗಳಿಗೊಮ್ಮೆ ಮದುವೆಯಾಗಲು ಬಯಸುತ್ತಾರೆ ಎಂದನಿಸುತ್ತದೆ .

ಪ್ರತಿ ವರ್ಷ ನಾನು ಈ ವದಂತಿಯನ್ನು ಕೇಳುತ್ತಲೇ ಬಂದಿದ್ದೇನೆ. ನನ್ನ ಮದುವೆಗೋಸ್ಕರ ಅವರು ಕಾಯುತ್ತಿದ್ದಾರೆ’ ಎಂದಿದ್ದಾರೆ. ನಟಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ (Vijay Deavarakonda) ಡೇಟಿಂಗ್ ಮಾಡುತ್ತಿದ್ದಾರೆ. ಎಂಬ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡಲು ಶುರುವಾಗಿ ಕೆಲವೇ ವರ್ಷಗಳೇ ಆಗಿವೆ. ತೆಲುಗಿನ ‘ಗೀತಾ ಗೋವಿಂದಂ’ (Geetha Govindam) ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ನಟಿಸಿದ ಬಳಿಕ ಈ ಜೋಡಿಯ ನಡುವೆ ಏನೋ ಇದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಬಗ್ಗೆ ಇಬ್ಬರೂ ಒಪ್ಪಿಕೊಳ್ಳದೇ ನಾವಿಬ್ಬರೂ ಸ್ನೇಹಿತರು ಎಂದೇ ಹೇಳಿಕೊಂಡು ಬರುತ್ತಿದ್ದಾರೆ.

Leave a Reply

Your email address will not be published. Required fields are marked *